ಪುತ್ತೂರು: ಇಲ್ಲಿನ ಪಡೀಲ್–ಬನ್ನೂರು ಕ್ರಾಸ್ ಬಳಿ ಅ.31ರ ರಾತ್ರಿ ರಿಕ್ಷಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.KA19H W1595 ನೋಂದಣಿ ಸಂಖ್ಯೆಯ ಬೈಕ್ ಬೋಳುವಾರಿನಿಂದ ಕೆಮ್ಮಾಯಿ ಕಡೆಗೆ ತೆರಳುತ್ತಿದ್ದ ವೇಳೆ, KA21 B6802 ನೋಂದಣಿ ಸಂಖ್ಯೆಯ ರಿಕ್ಷಾ ಪಡೀಲ್ ಕಡೆಯಿಂದ ಬನ್ನೂರು ಕಡೆಗೆ ತೆರಳಲು ತಿರುವು ಪಡೆದಿದೆ ಎನ್ನಲಾಗಿದೆ. ಈ ಸಂದರ್ಭ ಬೈಕ್ ಸವಾರನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರ ಡೊಮಿನೋಸ್ ಪಿಜ್ಜಾ ಸಂಸ್ಥೆಯ ಡೆಲಿವರಿ ಸಿಬ್ಬಂದಿ ಎಂದು ತಿಳಿದುಬಂದಿದೆ.ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!