ಪುತ್ತೂರು: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಅ.30ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದ ನರಸಿಂಹ @ ರಾಜು, ಮಹಾರಾಷ್ಟ್ರದ ವಿಜಯ್ ಸುರೇಶ ಪೊಂಕೆ, ನವೀನ್ ಚಂದ್ರ ಸಿಂಗ್, ಉತ್ತರ ಕನ್ನಡದ ಚಂದ್ರಕಾಂತ್ ಪೂಜಾರಿ ಹಾಗೂ ಮಂಡ್ಯದ ಪ್ರಕಾಶ್ ಬಹದ್ದೂರ್ ಎಂಬವರಿಗೆ ಈಗಾಗಲೇ ಪುತ್ತೂರಿನ ACJ ಮತ್ತು JMFC ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು.

ಈ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಶಾಲ್ ಪೊಂಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನ ಪತ್ತೆಗಾಗಿ ಪೊಲೀಸರು ಪ್ರಯತ್ನ ನಡೆಸಿದ್ದು, ನ್ಯಾಯಾಲಯದಿಂದ ಆತನ ವಿರುದ್ಧ ಪ್ರೊಕ್ಲಮೇಷನ್ (ಪ್ರಕಟಣೆ) ಹೊರಡಿಸಲಾಗಿತ್ತು.ಅ.30ರಂದು ಆರೋಪಿ ವಿಶಾಲ್ ಪೊಂಕೆ ನ್ಯಾಯಾಲಯಕ್ಕೆ ಹಾಜರಾಗಿದ್ದು, ಪುತ್ತೂರಿನ 2ನೇ ACJ ಮತ್ತು JMFC ನ್ಯಾಯಾಲಯ (ಸಂಚಾರಿ ನ್ಯಾಯಾಲಯ, ಕಡಬ) ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ವಿಶಾಲ್ ಪೊಂಕೆ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ MOB ತೆರೆಯಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಯೂ 2016ರಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅ.ಕ್ರ. 105/2016ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆಯಲ್ಲಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!