ಪುತ್ತೂರು: ಬೆಂಗಳೂರಿನ ಫೌಂಡೇಶನ್ ಒಂದರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ, ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾದ ಯುವಕನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ತಾಲೂಕಿನ ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗಳಿಗೆ ತೆರಳಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಕೇಳುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ.ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕರ್ತವ್ಯದಲ್ಲಿದ್ದ 112 ಸಿಬ್ಬಂದಿ ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ವಿಚಾರಣೆ ವೇಳೆ ಆತ ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಣೇಶ್ (24) ಎಂದು ತಿಳಿದುಬಂದಿದೆ. ಘಟನೆಯ ಕುರಿತು ದೂರು ನೀಡಲು ದೂರುದಾರರು ನಿರಾಕರಿಸಿದ ಹಿನ್ನೆಲೆಯಲ್ಲಿ, ಗಣೇಶ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಅಧಿನಿಯಮ 1965ರ ಕಲಂ 92ರಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!