ಪುತ್ತೂರು: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ರೋಗಿಗಳ ಆರೈಕೆಯಲ್ಲಿ ತೋರುತ್ತಿರುವ ಕಾಳಜಿಯನ್ನು ಗುರುತಿಸಿ ಪುತ್ತೂರಿನ ಚೇತನ್ ಪ್ರಕಾಶ್ ಕಜೆ ಅವರು 2026ನೇ ಸಾಲಿನ ವೈದ್ಯಕೀಯ ಸೇವಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಗೋವಾದ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅಮೂಲ್ಯ ಸೇವೆ, ರೋಗಿಗಳ ಆರೈಕೆ ಹಾಗೂ ಸಮಾಜದ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಮಾಡುತ್ತಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.ನ. 22ರಂದು ಮಧ್ಯಾಹ್ನ 2.30ಕ್ಕೆ ಗೋವಾದ ವಾಸ್ಕೋ ಬೈನಾ ರವೀಂದ್ರ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಮಾರಂಭದಲ್ಲಿ ಉಪಸ್ಥಿತರಿದ್ದು ಪ್ರಶಸ್ತಿ ಸ್ವೀಕರಿಸುವಂತೆ ಸಂಸ್ಥೆಯು ಆಹ್ವಾನಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!