ಪುತ್ತೂರು: ಪಾಂಗ್ಲೈಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 30ರಂದು ವಿಜ್ಞಾನ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಲೆಯ ಹಿರಿಯ ವಿದ್ಯಾರ್ಥಿ, ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ. ಪದವಿ ಪಡೆದಿರುವ ರಾಹುಲ್ ಪ್ರಕಾಶ್ ಭಾಗವಹಿಸಿದ್ದರು.

ಇವರು ಪಶುವೈದ್ಯಾಧಿಕಾರಿ ಡಾ. ಎಂ.ಪಿ. ಪ್ರಕಾಶ್ ಹಾಗೂ ವಿಟ್ಲ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಚಂದ್ರಕಲಾ ಕೆ.ಸಿ. ದಂಪತಿಯ ಪುತ್ರರಾಗಿದ್ದಾರೆ. ಪ್ರಸ್ತುತ ಡಿಝೋನ್ ಡಾನ್ಸ್ ಅಕಾಡೆಮಿಯಲ್ಲಿ ಕೊರಿಯೋಗ್ರಾಫರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅವರು, ಸಣ್ಣ ಚಟುವಟಿಕೆಯ ಮೂಲಕ ವಿಜ್ಞಾನ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು.

ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಪ್ರಕಾಶ್ ಅವರು, ತಮ್ಮ ಶಾಲಾ ದಿನಗಳ ನೆನಪುಗಳು ಹಾಗೂ ಅನುಭವಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನಾಡಿದರು.ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಅನಿತಾ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ರಾಹುಲ್ ಪ್ರಕಾಶ್ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮವನ್ನು ಬೃಂದಾ ನಿರೂಪಿಸಿದರು.ವಸ್ತುಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅವುಗಳ ಕಾರ್ಯವಿಧಾನ ಹಾಗೂ ವೈಜ್ಞಾನಿಕ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ, ಸಂಶೋಧನಾ ಆಸಕ್ತಿ ಹಾಗೂ ಪ್ರಸ್ತುತಪಡಿಸುವ ಕೌಶಲ್ಯವನ್ನು ಬೆಳೆಸುವಲ್ಲಿ ಈ ವಿಜ್ಞಾನ ವಸ್ತುಪ್ರದರ್ಶನ ಯಶಸ್ವಿಯಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉತ್ತಮ ಅನುಭವ ಹಾಗೂ ಪ್ರೇರಣೆ ನೀಡಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!