ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಆಶ್ರಯದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆದ ಪುತ್ತೂರುದ ಪಿಲಿಗೊಬ್ಬು ಸೀಸನ್-4 ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಟ್ರಸ್ಟ್‌ನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ ಸಂಸ್ಥಾಪಕ ಸಹಜ್ ರೈ ಬಳಜ್ಜ ಅವರು, ಪಿಲಿಗೊಬ್ಬು ಸೀಸನ್-4 ನಿರೀಕ್ಷೆಗೂ ಮೀರಿದ ಯಶಸ್ಸು ಕಾಣಲು ಪ್ರತಿಯೊಬ್ಬ ಸದಸ್ಯರ ಸಂಘಟಿತ ಪ್ರಯತ್ನ, ಸಮರ್ಪಣಾ ಮನೋಭಾವ ಹಾಗೂ ನಿರಂತರ ಪರಿಶ್ರಮವೇ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಸದಸ್ಯರು ತೋರಿದ ಸಹಕಾರ ಮತ್ತು ಜವಾಬ್ದಾರಿಯುತ ಕಾರ್ಯನಿರ್ವಹಣೆ ಪ್ರಶಂಸನೀಯ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟು ಹಾಗೂ ಉತ್ಸಾಹದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.ಪಿಲಿಗೊಬ್ಬು ಸಮಿತಿಯ ಅಧ್ಯಕ್ಷ ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಕಾರ್ಯಾಧ್ಯಕ್ಷ ರತನ್ ರೈ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲ ಸದಸ್ಯರ ಸೇವೆ, ಸಹಕಾರ ಹಾಗೂ ಪರಿಶ್ರಮವನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!