ಮಂಗಳೂರು: ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ ನಸೀಮಾ @ ನಸೀಮ (42) ಎಂದು ಗುರುತಿಸಲಾಗಿದೆ.ನವೆಂಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಸೀಮಾಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೂರೈಕೆ ಜಾಲದ ಕುರಿತು ತನಿಖೆ ಕೈಗೊಂಡಿದ್ದರು.ತನಿಖೆಯ ಭಾಗವಾಗಿ ಪಂಪ್‌ವೆಲ್ ಉಜ್ಜೋಡಿ ಸಮೀಪದ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್ ಸಂಖ್ಯೆ 103ಕ್ಕೆ ದಾಳಿ ನಡೆಸಿ ಶೋಧ ನಡೆಸಿದಾಗ, ಸುಮಾರು ₹15.30 ಲಕ್ಷ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಳು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಪ್ರಕರಣದಲ್ಲಿ ಆರೋಪಿ ಹಾಗೂ ಮಾದಕ ವಸ್ತು ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!