ಪುತ್ತೂರು: ಧಾರ್ಮಿಕ, ಸಾಮಾಜಿಕ, ರಾಜಕೀಯ, ಸಹಕಾರ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಕಳೆದ ಸುಮಾರು 40 ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿ ಕೆ. ವೇದನಾಥ ಸುವರ್ಣ ಅವರಿಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು
ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.ವೇದನಾಥ ಸುವರ್ಣ ಅವರು ಹಲವು ದಶಕಗಳಿಂದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಧಾರ್ಮಿಕ ಕ್ಷೇತ್ರದಲ್ಲಿ ಹಲವು ದೇವಸ್ಥಾನಗಳ ಅಭಿವೃದ್ಧಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಿ. ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿಯಲ್ಲಿ 2017ರಿಂದ 2020ರವರೆಗೆ ಸಲಹೆಗಾರರಾಗಿ ಜವಾಬ್ದಾರಿ ನಿರ್ವಹಿಸಿದ್ದರು.ಕೈಪಂಗಳ ಬಾರಿಕೆ ಬ್ರಹ್ಮ ಬೈದರ್ಕಳ ಗರಡಿಯ ಆಡಳಿತ ಮಂಡಳಿಯ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಕಳೆದ 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ, ಗರಡಿಯ ಜೀರ್ಣೋದ್ಧಾರ ಕಾರ್ಯದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ.ಎಲ್ಲರೊಂದಿಗೆ ಸೌಹಾರ್ದಯುತ ಸಂಬಂಧ ಹಾಗೂ ಉತ್ತಮ ಒಡನಾಟ ಹೊಂದಿರುವ ಇವರು ಸಮಾಜಮುಖಿ ಚಟುವಟಿಕೆಗಳಲ್ಲಿಯೂ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.ಪತ್ನಿ ನಯನಾ ವಿ. ಸುವರ್ಣ, ಪುತ್ರ ಭವಿಷ್ ವಿ. ಸುವರ್ಣ ಹಾಗೂ ಪುತ್ರಿ ಉಜ್ವಲ ವಿ. ಸುವರ್ಣ ಅವರೊಂದಿಗೆ ನರಿಮೊಗರು ಸುವರ್ಣ ಎಸ್ಟೇಟ್‌ನಲ್ಲಿ ವಾಸವಾಗಿರುವ ವೇದನಾಥ ಸುವರ್ಣ ಅವರು ಸಂತೃಪ್ತ ಜೀವನ ನಡೆಸುತ್ತಿದ್ದಾರೆ.









