ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ಮುರಸು ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿ ಬೆಂಗಳೂರಿನಲ್ಲೂ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!