ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ. ಹೆಗ್ಗಡೆಯವರಿಗೆ ಗೌರವಾಭಿನಂದನೆ ಸಲ್ಲಿಸಿದರು.
ರಜತ ಮಹೋತ್ಸವ ಆಚರಿಸುತ್ತಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನಿ., ದರ್ಬೆ, ಪುತ್ತೂರು ಇದರ ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೇಂದ್ರ ಕಚೇರಿ, ಸವಣೂರು ಶಾಖೆ ಹಾಗೂ ವಾಣಿಜ್ಯ ಸಂಕೀರ್ಣಗಳ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಈ ಸಂದರ್ಭದಲ್ಲಿ ಡಾ. ಹೆಗ್ಗಡೆಯವರಿಗೆ ನೀಡಲಾಯಿತು.
ಅಲ್ಲದೆ, ವಿದ್ಯಾರಶ್ಮಿ ವಿದ್ಯಾಲಯದ ರಜತ ಮಹೋತ್ಸವದ ಅಂಗವಾಗಿ ಹೊರತರಲಿರುವ ಸ್ಮರಣ ಸಂಚಿಕೆಗೆ ಶುಭಾಶಯ ಸಂದೇಶ ನೀಡುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ರಾಮಯ್ಯ ರೈ ಎನ್., ರಶ್ಮಿ ರೈ ಎಸ್., ಮಹಾಪ್ರಬಂಧಕ ವಸಂತ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ ರಾಜ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ರಾಜಲಕ್ಷ್ಮಿ ಎಸ್. ರೈ ಹಾಗೂ ಸಂಘದ ಉಜಿರೆ ಶಾಖೆಯ ಶಾಖಾ ವ್ಯವಸ್ಥಾಪಕಿ ವಾಣಿಶ್ರೀ ಬಿ.ಎಲ್. ಉಪಸ್ಥಿತರಿದ್ದರು.









