ಪುತ್ತೂರು: ನೆಲ್ಯಾಡಿ ಸಮೀಪದ ದೊಂತಿಲದಲ್ಲಿ ಕಾರೊಂದು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ಬುಧವಾರ ಸಂಭವಿಸಿದೆ.
ಬಲ್ಯ ನಿವಾಸಿ ಸುಂದರ್ ಆಳ್ವ ಅವರು ನೆಲ್ಯಾಡಿಯಿಂದ ಬಲ್ಯ ಕಡೆಗೆ ನೆಲ್ಯಾಡಿ–ಬಲ್ಯ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದೊಂತಿಲದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೊಂದು ಮುರಿದು ಬಿದ್ದಿದ್ದು, ಕಂಬ ಹಾಗೂ ವಿದ್ಯುತ್ ತಂತಿಗಳು ಕಾರಿನ ಮೇಲೆಯೇ ಬಿದ್ದಿವೆ. ಆ ಸಂದರ್ಭದಲ್ಲಿ ವಿದ್ಯುತ್ ತಂತಿಗಳಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದರೂ, ಸ್ವಯಂಚಾಲಿತ ವ್ಯವಸ್ಥೆಯ ಮೂಲಕ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.









