ಪುತ್ತೂರು: ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನ. 4ರಂದು ನಡೆದ ‘ವರ್ಣಿಕಾ–2026’ ಅಂತರ್ ಕಾಲೇಜು ಮಟ್ಟದ ಫೆಸ್ಟ್‌ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ತುಳು ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಕಲಾ ವಿಭಾಗದ ಧೃತಿ ಯು. ರೈ ಪ್ರಥಮ ಸ್ಥಾನ ಗಳಿಸಿದ್ದಾರೆ. ಕನ್ನಡ ಕಥಾ ಬರಹ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅವನಿ ಹಾಗೂ ಹಿಂದಿ ಕಾವ್ಯ ರಚನಾ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ದಿಶಾ ಎಸ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಇದಲ್ಲದೆ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಅತ್ಯುತ್ತಮ ಶಿಸ್ತುಬದ್ಧ ವಿದ್ಯಾರ್ಥಿಗಳ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.









