ಪುತ್ತೂರು: ಸಾಲ್ಮರ ವಾರ್ಡ್ ಸಂಖ್ಯೆ 08ರ ವ್ಯಾಪ್ತಿಯ ತಾರಿಗುಡ್ಡೆ ಸಂಪರ್ಕ ರಸ್ತೆಯು ಕಳಪೆ ಕಾಮಗಾರಿಯಿಂದಾಗಿ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಈ ರಸ್ತೆಯನ್ನು ಅವಲಂಬಿಸಿರುವ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿಯನ್ನು ಸರಿಪಡಿಸುವುದರ ಜತೆಗೆ ರಸ್ತೆಯನ್ನು ಆದಷ್ಟು ಶೀಘ್ರದಲ್ಲಿ ದುರಸ್ತಿಗೊಳಿಸಬೇಕು. ಆ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಪುತ್ತೂರು ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾರಿಗುಡ್ಡೆ ಬ್ರಾಂಚ್ ಸಮಿತಿ ಅಧ್ಯಕ್ಷ ಉಮ್ಮರ್ ಎನ್.ಎಸ್., ಕಾರ್ಯದರ್ಶಿ ಅನ್ವರ್, ಲತೀಫ್ ಸಾಲ್ಮರ ಹಾಗೂ ಲುಕ್ಮಾನ್ ತಾರಿಗುಡ್ಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!