ಪುತ್ತೂರು: ಮಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ, ಉದ್ಯಮಿ ಸಂತೋಷ್ ಕುಮಾರ್ ಎ. (69) ಅವರು ನ. 7ರಂದು ನಿಧನರಾದರು.
ಸಂತೋಷ್ ವೈನ್ಸ್ ಮತ್ತು ಶಿವಾನಿ ಸಾಫ್ಟ್ ಡ್ರಿಂಕ್ಸ್‌ನ ಮಾಲಕರಾಗಿದ್ದ ಅವರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಪರಿವಾರ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮೃತರು ಪತ್ನಿ ನಿಶಾ, ಪುತ್ರಿಯರಾದ ನೇಹಾ ಮತ್ತು ಸಮೀಕ್ಷಾ, ಪುತ್ರ ರಾಹುಲ್, ಅಳಿಯಂದಿರಾದ ಸಂದೀಪ್ ಮತ್ತು ಸುಶಿತ್, ಮೊಮ್ಮಕ್ಕಳು, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!