ಉಡುಪಿ: ಸೈಕಲ್‌ನಿಂದ ನಿಯಂತ್ರಣ ತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ಪಣಿಯೂರು ಪೇಟೆಯಲ್ಲಿ ನಡೆದಿದೆ.
ಬೆಳಪು ದರ್ಖಾಸು ನಿವಾಸಿ ವಿಶ್ವನಾಥ (47) ಮೃತಪಟ್ಟವರು.
ವಿಶ್ವನಾಥ ಅವರು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪಣಿಯೂರು ಪೇಟೆಯ ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳಕ್ಕೆ ಧಾವಿಸಿದ ಉಚ್ಚಿಲದ ಸಮಾಜ ಸೇವಕರಾದ ಜಲಾಲುದ್ದೀನ್ ಮತ್ತು ಹಮೀದ್ ಅವರು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









