ಪುತ್ತೂರು: ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಸ್ಕೂಟರ್ನಲ್ಲಿ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಇಯಾಸ್ ಪುರುಷರ ಕಟ್ಟೆ ಬಂಧಿತ ಆರೋಪಿ.
ನ. 6ರಂದು ಮಧ್ಯಾಹ್ನ ಮಹಿಳೆಯು ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್ನಲ್ಲಿ ಬಂದ ಆರೋಪಿ ಅವರನ್ನು ಹಿಂಬಾಲಿಸಿಕೊಂಡು ಬಂದು, ಅವರ ಬಳಿ ಸ್ಕೂಟರ್ ನಿಲ್ಲಿಸಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಯಭೀತರಾದ ಮಹಿಳೆ ಬೊಬ್ಬೆ ಹೊಡೆದಿದ್ದು, ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಯನ್ನು ಹಿಡಿದು ವಿಚಾರಿಸಿದ್ದಾರೆ.
ಈತ ಅ. 30ರಂದು ಕೂಡ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಸೂಕ್ತ ಜಾಮೀನು ಷರತ್ತುಗಳೊಂದಿಗೆ ಆರೋಪಿಯನ್ನು ಬಿಡುಗಡೆಗೊಳಿಸಿದೆ.









