ಪುತ್ತೂರು: ಕರ್ನಾಟಕ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರಿನ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಉಪನಿರ್ದೇಶಕರ ಕಚೇರಿ ಹಾಗೂ ತಿಪಟೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಸುಮತಿ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಶಾಲೆಯ ತಂಡ ಉತ್ತಮ ಪ್ರದರ್ಶನ ನೀಡಿದೆ.
ಫೈನಲ್ ಪಂದ್ಯದಲ್ಲಿ ಬೆಳಗಾವಿ ತಂಡದ ವಿರುದ್ಧ ನಡೆದ ರೋಚಕ ಹಣಾಹಣಿಯಲ್ಲಿ 22-25 ಅಂಕಗಳ ಅಂತರದಿಂದ ಸೋಲು ಕಂಡು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಶಾಲೆಯ ಐವರು ವಿದ್ಯಾರ್ಥಿನಿಯರು ಸತತ ನಾಲ್ಕನೇ ಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಾದ ಜುಏನಾ ಡ್ಯಾಝಲ್ ಕುಟಿನ್ಹಾ, ಸನ್ನಿಧಿ, ಹಾರ್ದಿಕಾ ಪಿ., ಧನ್ಯಶ್ರೀ ಹಾಗೂ ಜೆನಿಟ ಸಿಂಧು ಪಸನ್ನ ಅವರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿ ಅವರ ಮಾರ್ಗದರ್ಶನದಲ್ಲಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಅವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!