ವಿಟ್ಲ: ಬಂಟ್ವಾಳ ತಾಲ್ಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆಯಲ್ಲಿ ಪರವಾನಿಗೆ ಮತ್ತು ಸೂಕ್ತ ದಾಖಲೆಗಳಿಲ್ಲದೆ ಕೆಂಪು ಲ್ಯಾಟರೈಟ್ ಮಣ್ಣು ಸಾಗಿಸುತ್ತಿದ್ದ ಘನಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
KA-21-C-4608 ನೋಂದಣಿ ಸಂಖ್ಯೆಯ ಲಾರಿ ಬೈರಿಕಟ್ಟೆಯ ಸಾರ್ವಜನಿಕ ರಸ್ತೆಯಲ್ಲಿ ದುರಸ್ತಿಗೀಡಾಗಿ ನಿಂತಿತ್ತು. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಲಾರಿ ಚಾಲಕ ಹಾಸನ ಜಿಲ್ಲೆಯ ಸಕಲೇಶಪುರದ ಇರ್ಫಾನ್ ಪಾಷಾ (40) ಅವರನ್ನು ವಿಚಾರಿಸಿದಾಗ, ಲಾರಿ ದುರಸ್ತಿಗೀಡಾಗಿರುವುದಾಗಿ ತಿಳಿಸಿದ್ದರು. ಬಳಿಕ ಲಾರಿಯಲ್ಲಿದ್ದ ಕೆಂಪು ಲ್ಯಾಟರೈಟ್ ಮಣ್ಣಿನ ಸಾಗಾಟಕ್ಕೆ ಯಾವುದೇ ಪರವಾನಿಗೆ ಅಥವಾ ದಾಖಲೆ ಇಲ್ಲದಿರುವುದು ಪತ್ತೆಯಾಗಿದೆ.

ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!