src="https://vidyamaana.com/wp-content/uploads/2024/09/gl-today-1.jpeg" alt="" width="1810" height="2560" />

ಹೊಸದಿಲ್ಲಿ: ಬೆಂಗಳೂರಿನ ಗೋರಿಪಾಳ್ಯದ ಕುರಿತು ಉಲ್ಲೇಖಿಸುವಾಗ, ಮುಸ್ಲಿಮ್ ಸಮುದಾಯ ಹೆಚ್ಚಾಗಿರುವ ಪ್ರದೇಶವನ್ನು ಪಾಕಿಸ್ತಾನ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಹೇಳಿಕೆ ನೀಡಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ.


ಈ ಕುರಿತು ವರದಿಯನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಆದೇಶ ನೀಡಿದೆ.


ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ಬಿಆರ್ ಗವಾಯಿ, ಸೂರ್ಯಕಾಂತ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠವು ಇಂದು ಈ ಕುರಿತು ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ.

ಇತ್ತೀಚೆಗೆ ನಡೆದ ವಿಚಾರಣೆಯೊಂದರ ಸಂದರ್ಭದಲ್ಲಿ, “ಮೈಸೂರು ರಸ್ತೆ ಮೇಲುಸೇತುವೆಗೆ ಹೋಗಿ ನೋಡಿ, ಪ್ರತಿ ಆಟೋರಿಕ್ಷಾದಲ್ಲೂ 10 ಮಂದಿಯಿರುತ್ತಾರೆ.
ಇಲ್ಲಿ ಕಾನೂನು ಅನ್ವಯಿಸುವುದಿಲ್ಲ. ಯಾಕೆಂದರೆ, ಮೈಸೂರು ಮೇಲ್ಸೇತುವೆಯು ಗೋರಿಪಾಳ್ಯದಿಂದ ಎಡಕ್ಕೆ ಮಾರುಕಟ್ಟೆಗೆ ತೆರಳುತ್ತದೆ. ಇದು ಪಾಕಿಸ್ತಾನದಲ್ಲಿದೆ, ಭಾರತದಲ್ಲಲ್ಲ. ಇದು ವಾಸ್ತವ. ಅಲ್ಲಿಗೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿದರೂ, ಅವರನ್ನು ಥಳಿಸಲಾಗುತ್ತೆ” ಎಂದು ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ್ದಾರೆ.
ಸಾಂವಿಧಾನಿಕ ಹುದ್ದೆಯಲ್ಲಿರುವವರೊಬ್ಬರು ಇಂತಹ ಹೇಳಿಕೆಯನ್ನು ನೀಡಲು ಹೇಗೆ ಸಾಧ್ಯ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!