ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಧರ್ಮಗುರು ವಿರುದ್ಧ ಎರಡನೇ ಪ್ರಕರಣ ದಾಖಲು
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿದೆ.
ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರತಿ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ಅವರು ಮೇ 13, 2026ರಂದು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಈ ದೂರಿನ ಆಧಾರದಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಬಿಎನ್‌ಎಸ್ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿದೆ.
ಇದಕ್ಕೂ ಮೊದಲು 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಅಕ್ಟೋಬರ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡನೇ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ.

Leave a Reply

Your email address will not be published. Required fields are marked *

You missed

Join WhatsApp Group
error: Content is protected !!