ಬಂಟ್ವಾಳ: ಯಾವುದೇ ಪರವಾನಿಗೆ ಇಲ್ಲದೆ ಪಿಕಪ್ ವಾಹನದಲ್ಲಿ ಜಾನುವಾರನ್ನು ಸಾಗಿಸುತ್ತಿದ್ದ ವೇಳೆ ವಿಟ್ಲ ಪೊಲೀಸ್ ಸಿಬ್ಬಂದಿ ವಾಹನವನ್ನು ತಡೆದು ಪರಿಶೀಲಿಸಿದ ಘಟನೆ ನ.10ರ ರಾತ್ರಿ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ.
ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳು ರಾತ್ರಿ ಚೆಕ್‌ಪಾಯಿಂಟ್ ಕರ್ತವ್ಯದಲ್ಲಿದ್ದಾಗ, KA-19-AB-3927 ನೋಂದಣಿ ಸಂಖ್ಯೆಯ ಬೊಲೆರೋ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ವಾಹನದಲ್ಲಿ ಒಂದು ಜಾನುವಾರು ಪತ್ತೆಯಾಗಿದೆ.
ವಾಹನದಲ್ಲಿದ್ದ ಬಂಟ್ವಾಳ ಕರೋಪಾಡಿ ನಿವಾಸಿಗಳಾದ ಒ.ಪಿ. ಅಬ್ದುಲ್ಲಾ (45) ಹಾಗೂ ಸುಬ್ರಮಣ್ಯ (55) ಅವರನ್ನು ವಿಚಾರಿಸಿದಾಗ, ಯಾವುದೇ ಪರವಾನಿಗೆ ಇಲ್ಲದೆ ಜಾನುವಾರನ್ನು ಸಾಗಿಸುತ್ತಿರುವುದು ತಿಳಿದುಬಂದಿದೆ. ಅಲ್ಲದೆ, ಕಾರಿನಲ್ಲಿ ಬಂದಿದ್ದ ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ಎಂಬವರ ಸೂಚನೆಯ ಮೇರೆಗೆ ಜಾನುವಾರನ್ನು ಸಾಗಿಸುತ್ತಿದ್ದುದಾಗಿ ಆರೋಪಿಗಳು ತಿಳಿಸಿರುವುದಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ.
ಪೊಲೀಸರು ಜಾನುವಾರು ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಒ.ಪಿ. ಅಬ್ದುಲ್ಲಾ, ಸುಬ್ರಮಣ್ಯ, ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 233/2026, ಕಲಂ 303(2) ಬಿಎನ್‌ಎಸ್ 2023ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.









