ಪುತ್ತೂರು: ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂದ್ಯಾಟದಲ್ಲಿ ಶಾಲೆಯ ಮೂರು ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ನಡೆಯಿತು.

ವೈಯಕ್ತಿಕ ಪ್ರಶಸ್ತಿಗಳಲ್ಲೂ ಸಾಧನೆ
14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪೂರ್ವಿಕ್ ಅವರು ಬೆಸ್ಟ್ ಆಲ್‌ರೌಂಡರ್ ಹಾಗೂ ಮೊಹಮ್ಮದ್ ಮಿಫ್ರಾ ಅವರು ಬೆಸ್ಟ್ ರಿಸೀವರ್ ಪ್ರಶಸ್ತಿ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ ವಿನ್ಯ ಪಿ. ಸಮನಿ ಅವರು ಬೆಸ್ಟ್ ಆಲ್‌ರೌಂಡರ್ ಹಾಗೂ ಸಮನ್ವಿ ಕೆ. ಅವರು ಬೆಸ್ಟ್ ರಿಸೀವರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಾಲೆಯ ಪ್ರಾಂಶುಪಾಲರಾದ ಭಗಿನಿ ಅನಿತಾ ಅವರ ಮಾರ್ಗದರ್ಶನದಲ್ಲಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್, ಅಕ್ಷಯ್ ಮತ್ತು ಹರೀಶ್ ಅವರ ತರಬೇತಿಯಲ್ಲಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ, ಪೋಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!