ಬೆಳ್ತಂಗಡಿ: ಇಲ್ಲಿನ ಚರ್ಚ್ ರೋಡ್‌ನಲ್ಲಿ ನ.11ರ ಮುಂಜಾನೆ ಸಂಭವಿಸಿದ ಭೀಕರ ಸರಣಿ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.
ಮೃತರನ್ನು ನಾವೂರು ನಿವಾಸಿ ಸಂತೋಷ್ (32) ಹಾಗೂ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ಗೂಡ್ಸ್ ವಾಹನವೊಂದು ಗುರುವಾಯನಕೆರೆ ಕಡೆಗೆ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬೈಕ್ ಸವಾರ ಮೋಹನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!