ಬಂಟ್ವಾಳ: ಪಾಣೆಮಂಗಳೂರು–ಮೆಲ್ಕಾರ್‌ನ ಸ್ವರಾಜ್ ಸ್ಟುಡಿಯೋ ಮಾಲಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಬುಧವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು.
ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ನೇಹಾ ಹಾಗೂ ಅವರ ಪತಿ ಪ್ರತೀಕ್ ಉದ್ಯೋಗದ ನಿಮಿತ್ತ ಕುವೈತ್‌ನಲ್ಲಿ ನೆಲೆಸಿದ್ದರು. ಮೃತರ ಅಂತಿಮ ವಿಧಿವಿಧಾನಗಳು ಬಿ.ಸಿ.ರೋಡಿನ ಮಯ್ಯರಬೈಲಿನಲ್ಲಿರುವ ಪತಿಯ ಮನೆಯಲ್ಲಿ ನೆರವೇರಿದವು.
ಮೃತರು ಪತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.









