ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ 102ನೇ ಸಂಸ್ಥಾಪಕರ ದಿನದ ಅಂಗವಾಗಿ ನ.13ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಶಿಬಿರದಲ್ಲಿ ಜಿ.ಎಲ್. ಸಮೂಹ ಸಂಸ್ಥೆಗಳ ಸಿಬ್ಬಂದಿಗಳ ಜತೆಗೆ ಆಸಕ್ತ ಸಾರ್ವಜನಿಕ ರಕ್ತದಾನಿಗಳಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ರಕ್ತದಾನದ ಮೂಲಕ ಸಮಾಜಮುಖಿ ಕಾರ್ಯದಲ್ಲಿ ಕೈಜೋಡಿಸುವ ಉದ್ದೇಶದಿಂದ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸುವಂತೆ ಜಿ.ಎಲ್. ಸಮೂಹ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!