ಪುತ್ತೂರು: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದರ ಬೀಗ ಮುರಿದು ಸುಮಾರು ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ಬಾಳ್ತಿಲ ಗ್ರಾಮದ ಸತೀಶ್ ಶೆಣೈ (57) ಅವರು 2026ರ ಫೆ.4ರಂದು ಸಂಜೆ ಮನೆಗೆ ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಹಿಂತಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಕಂಡುಬಂದಿದೆ. ಮನೆಯೊಳಗೆ ಪರಿಶೀಲಿಸಿದಾಗ ಕೊಠಡಿಯ ಲಾಕರ್‌ನಲ್ಲಿದ್ದ ಸುಮಾರು ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹5 ಸಾವಿರ ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳದ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಪಾ (21) ಎಂಬಾತ ನ.11ರಂದು ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಪ್ರಕರಣದ ವಿಚಾರಣೆಗಾಗಿ ಪೊಲೀಸರು ಆತನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!