ಉಪ್ಪಿನಂಗಡಿ: ಸುಲಿಗೆ ಪ್ರಕರಣವೊಂದರಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ ಬಂಧಿತ ಆರೋಪಿ.
2006ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿಯಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಅವರ ಮನೆಗೆ ನಾಲ್ವರು ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದಿದ್ದರು. ಬಳಿಕ ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ ಚಿನ್ನಾಭರಣ, ನಗದು ಸೇರಿದಂತೆ ಒಟ್ಟು ₹2,35,800 ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿದ್ದರು.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 187/2006ರಂತೆ ಐಪಿಸಿ ಕಲಂ 395 ಮತ್ತು 397ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಯಾಗಿದ್ದ ಮಸೂದ್ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹೆಡ್‌ಕಾನ್‌ಸ್ಟೆಬಲ್ ನಂಜುಂಡಯ್ಯ (HC-325) ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಮ್ಯಾಥ್ಯು ವರ್ಗಿಸ್ (PC-1944) ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

You missed

Join WhatsApp Group
error: Content is protected !!