ಸುಬ್ರಹ್ಮಣ್ಯ: ಕೊಲೆ ಪ್ರಕರಣವೊಂದರಲ್ಲಿ ಸುಮಾರು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಕೇರಳದ ತ್ರಿಶ್ಶೂರು ನಿವಾಸಿ ಟೋಮಿ ಅಲಿಯಾಸ್ ಥಾಮಸ್ ಬಂಧಿತ ಆರೋಪಿ.
2000ರ ಸೆಪ್ಟೆಂಬರ್ 10ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿಗಾರಿನಲ್ಲಿ ಕೆಲಸದ ವಿಚಾರವಾಗಿ ಕೇರಳ ಮೂಲದ ಜೊಯ್, ಶೆಲ್ಟನ್ ಮತ್ತು ಟೋಮಿ ಅಲಿಯಾಸ್ ಥಾಮಸ್ ನಡುವೆ ಜಗಳ ನಡೆದಿತ್ತು. ಈ ಸಂದರ್ಭದಲ್ಲಿ ಜೊಯ್ ಎಂಬಾತನಿಗೆ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು.
ಈ ಘಟನೆಗೆ ಸಂಬಂಧಿಸಿದಂತೆ ಟೋಮಿ ಅಲಿಯಾಸ್ ಥಾಮಸ್ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 37/2000ರಂತೆ ಐಪಿಸಿ ಕಲಂ 302 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ನವೆಂಬರ್ 12, 2026ರಂದು ಸುಬ್ರಹ್ಮಣ್ಯ ಠಾಣೆಯ ಎಎಸ್‌ಐ ಸ್ಕರೀಯಾ, ಸುಳ್ಯ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಹರೀಶ್ (HC-557) ಹಾಗೂ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆದ್ರಾಂ (HC-811) ಅವರು ಕೇರಳದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನವೆಂಬರ್ 25, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

You missed

Join WhatsApp Group
error: Content is protected !!