ಪುತ್ತೂರು: ಮನೆಗೆ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಬಳಿಕ ಮನೆ ಅಂಗಳಕ್ಕೆ ಬಂದು ಹಲ್ಲೆ ನಡೆಸಿದ ಆರೋಪದ ಮೇರೆಗೆ ಒಂಬತ್ತು ಮಂದಿ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾದ ಬಾಲಕ ಅ. 5ರಂದು ರಾತ್ರಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆತನ ಪರಿಚಯದ ಸುಧಾಕರ, ಪೇರಿಗೇರಿ ಚಂದ್ರ ಹಾಗೂ ಹರೀಶ್ ಎಂಬವರು ರಸ್ತೆ ಬದಿಯಲ್ಲಿ ನಿಂತು ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.
ಕೆಲ ಹೊತ್ತಿನ ಬಳಿಕ ಸುಧಾಕರ, ಹರೀಶ್, ಪೇರಿಗೇರಿ ಚಂದ್ರ, ವಸಂತಿ, ಮೋಹನ್, ಗೋವಚಂದ್ರ, ಟಿ.ಸಿ. ಚಂದ್ರ, ಪ್ರಮೀಳ ಹಾಗೂ ಸುಮ ಎಂಬವರು ಬಾಲಕನ ಮನೆಯ ಅಂಗಳಕ್ಕೆ ಬಂದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಬಂದ ಬಾಲಕನ ತಾಯಿ ಹಾಗೂ ತಂಗಿಯನ್ನೂ ದೂಡಿ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಯಿಂದ ಗಾಯಗೊಂಡ ಬಾಲಕ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಈ ಕುರಿತು ನ. 11ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳು ಹಾಗೂ ಬಾಲನ್ಯಾಯ ಕಾಯ್ದೆಯ ಕಲಂ 75ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!