ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ (ರಿ.) ವತಿಯಿಂದ ದೀಪೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ನ.18ರಂದು ಮಧ್ಯಾಹ್ನ 12.39ರ ಶುಭ ಮುಹೂರ್ತದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉದ್ಯಮಿಗಳಾದ ವಾಮನ ಪೈ, ಜಯಕುಮಾರ್ ನಾಯರ್, ಡಿ. ಶಿವ ಭಟ್ ಜ್ಯುವೆಲ್ಲರ್ಸ್ನ ಈಶ್ವರ ಮುರಳಿ ಹಾಗೂ ಮಣ್ಣಾಪು ಕೊರಗಜ್ಜ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ಮಣ್ಣಾಪು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು, ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿರುವರು.









