ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಎರಡು ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿರುವ ಘಟನೆ ನ.18ರಂದು ಬೆಳಗಿನ ಜಾವ ಸುಳ್ಯ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಬಂಧಿತರನ್ನು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ಗುರುತಿಸಲಾಗಿದೆ.
ನ.18ರಂದು ಬೆಳಗಿನ ಜಾವ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು.
ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು, ಮೈದಾನದಲ್ಲಿದ್ದ ಕಂಬಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವಾಗಿ ಮಾರಾಟ ಮಾಡುವ ಉದ್ದೇಶ ಹೊಂದಿರುವುದಾಗಿ ಆರೋಪಿಗಳು ತಿಳಿಸಿರುವುದಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ.

ಆರೋಪಿಗಳು ಸ್ಥಳಕ್ಕೆ ಬಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 161/2026ರಂತೆ ಬಿಎನ್‌ಎಸ್ 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!