ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ನ.19ರಂದು ಗುರುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ 110/33/11 ಕೆವಿ ಮತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್ಪ್ರೆಸ್ ಹಾಗೂ ವಾಟರ್ ಸಪ್ಲೈ ಫೀಡರ್ಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಈ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ಬೊಳ್ಳಾರು, ನೆಕ್ಕಿಲಾಡಿ, ಸುಭಾಷ್ ನಗರ ಹಾಗೂ ವಾಟರ್ ಸಪ್ಲೈ ಪರಿಸರಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ಈ ಪ್ರದೇಶಗಳ ವಿದ್ಯುತ್ ಗ್ರಾಹಕರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.









