ಪುತ್ತೂರು: ದರ್ಬೆಯ ಫಿಲೋನಗರದಲ್ಲಿರುವ ಸೇಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಆಶೀರ್ವಚನ ಹಾಗೂ ಉದ್ಘಾಟನಾ ಸಮಾರಂಭ ನ. 20ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭದ ಆಶೀರ್ವಚನವನ್ನು ಕೆಥೋಲಿಕ್ ಬೋರ್ಡ್ ಆಫ್ ಎಜುಕೇಶನ್ (CBE) ಉಪಾಧ್ಯಕ್ಷ ಮೋನ್ಸಿಂಜೋರ್ ಮ್ಯಾಕ್ಸಿಮ್ ಎಲ್. ನೊರೋನ್ಹಾ ನೆರವೇರಿಸಲಿದ್ದು, ಸಮಾಜ ಸೇವಕ ಹಾಗೂ ಉದ್ಯಮಿ ಮೈಕಲ್ ಡಿಸೋಜಾ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ CBE ಕಾರ್ಯದರ್ಶಿ ರೆ. ಡಾ. ಪ್ರವೀಣ್ ಲಿಯೋ ಲಸ್ರಾದೊ, ಮೈ ದೇ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ, ಮೈ ದೇ ದೇವುಸ್ ಚರ್ಚ್ನ ಪಿಟಿಎ ಉಪಾಧ್ಯಕ್ಷ ರೋಷನ್ ಲಸ್ರಾದೊ, ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಆಂಟನಿ ಒಲಿವೇರಾ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಶ್ರೀಪ್ರಕಾಶ್ ಬಿ. ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ರವರು ತಿಳಿಸಿದ್ದಾರೆ.









