ಪುತ್ತೂರು, ನ.20: ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಆರ್ಯಾಪು ಜಿಲ್ಲಾ ಪಂಚಾಯತ್ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ನಡೆಸಿತು.
ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಕುರಿತು ಚರ್ಚಿಸಲಾಯಿತು. ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಸಂಘಟನಾತ್ಮಕ ಚಟುವಟಿಕೆಗಳನ್ನು ಚುರುಕುಗೊಳಿಸುವುದು ಹಾಗೂ ಚುನಾವಣಾ ಸಿದ್ಧತೆಗಳ ಭಾಗವಾಗಿ ಕೈಗೊಳ್ಳಬೇಕಾದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಲಕೆಮಜಲು, ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಜುನೈದ್ ಸಾಲ್ಮರ, SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಸಿರಾಜ್ ಕೂರ್ನಡ್ಕ ಹಾಗೂ ಕುಂಬ್ರ ಬ್ಲಾಕ್ ಅಧ್ಯಕ್ಷ ಇರ್ಷಾದ್ ಜಾರತ್ತಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.









