ಪುತ್ತೂರು :ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ನೆಟ್ಟಣಿಗೆಮುಡ್ನೂರು ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಚುನಾವಣಾ ಪೂರ್ವಭಾವಿ ಸಭೆಯು ಈಶ್ವರಮಂಗಲದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು.
ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನೆಟ್ಟಣಿಗೆಮುಡ್ನೂರು ಕ್ಷೇತ್ರದ ಚುನಾವಣಾ ಉಸ್ತುವಾರಿ ಶಬೀರ್ ತಲಪಾಡಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಸಿದ್ಧತೆಗಳು, ಕ್ಷೇತ್ರದಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಬಲಪಡಿಸುವುದು ಹಾಗೂ ಮುಂದಿನ ಚುನಾವಣಾ ಕಾರ್ಯತಂತ್ರಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯ ಹಮೀದ್ ಪುತ್ತೂರು, SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಸಂಶುದ್ದೀನ್ ಈಶ್ವರಮಂಗಲ, ಕ್ಷೇತ್ರ ಸಮಿತಿ ಸದಸ್ಯರಾದ ಜುನೈದ್ ಸಾಲ್ಮರ, ಸಿರಾಜ್ ಕೂರ್ನಡ್ಕ, ಕುಂಬ್ರ ಬ್ಲಾಕ್ ಅಧ್ಯಕ್ಷ ಇರ್ಷಾದ್ ಜಾರತ್ತಾರ್, ನೆಟ್ಟಣಿಗೆಮುಡ್ನೂರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಸದಸ್ಯ ರಿಯಾಝ್ ಗೋಳಿತ್ತಡಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.









