ಪುತ್ತೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ SIR (ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನ.24ರಂದು ಕಬಕ ಜಂಕ್ಷನ್‌ನಲ್ಲಿ ಪ್ರತಿಭಟನಾ ಧರಣಿ ಆಯೋಜಿಸಲಾಗಿದೆ.
ನ.24ರಂದು ಮಂಗಳವಾರ ಸಂಜೆ 4.30ರಿಂದ ರಾತ್ರಿ 9.30ರವರೆಗೆ ಕಬಕ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ನ್ಯಾಯಕ್ಕಾಗಿ ಒಂದಾಗೋಣ, ಹೋರಾಟಕ್ಕೆ ಧ್ವನಿಯಾಗೋಣ ಎಂಬ ಘೋಷಣೆಯೊಂದಿಗೆ ನಡೆಯಲಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಮನವಿ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!