ಪುತ್ತೂರು: ನ.26ರಿಂದ 29ರವರೆಗೆ ನೆಲಪ್ಪಾಲಿನ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನಡೆಯಿ

ಮುಳಿಯ ಕೇಶವಪ್ರಸಾದ್ ಅವರು ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯ ವಿವಿಧ ಬೀದಿಗಳಲ್ಲಿ ಸಂಚರಿಸಿದ ತಂಡವು ಅಂಗಡಿ ಮುಂಗಟ್ಟುಗಳು ಹಾಗೂ ಸಾರ್ವಜನಿಕರಿಗೆ ಆಮಂತ್ರಣ ಪತ್ರಿಕೆಗಳನ್ನು ವಿತರಿಸಿ ಪಂಚಮುಖಿ ಹವನ ಕಾರ್ಯಕ್ರಮಕ್ಕೆ ಆಹ್ವಾನಿಸಿತು.
ಧಾರ್ಮಿಕ ಶ್ರದ್ಧೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ನಡೆಯಲಿರುವ ಪಂಚಮುಖಿ ಹವನದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪುತ್ತೂರಿನ ಹಿಂದೂ ಸಂಘಟನೆಗಳ ಪ್ರಮುಖರು, ಬಿಜೆಪಿ ಮುಖಂಡರು, ಆಂಜನೇಯನ ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!