ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ದೀಪೋತ್ಸವದ ಸಿದ್ಧತೆಗಳು ಆರಂಭಗೊಂಡಿವೆ. ದೀಪೋತ್ಸವದ ಕಾರ್ಯಾಲಯವನ್ನು ದೇವಸ್ಥಾನದ ಮುಂಭಾಗದಲ್ಲಿ ಉದ್ಘಾಟಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಪುತ್ತೂರಿನಲ್ಲಿ ಅದ್ದೂರಿ ಹಾಗೂ ವಿಶಿಷ್ಟ ದೀಪೋತ್ಸವ ನಡೆಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ದೀಪೋತ್ಸವ ಯಶಸ್ವಿಯಾಗಲು ಎಲ್ಲರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ಅಗತ್ಯ. ಈ ಹಿನ್ನೆಲೆಯಲ್ಲಿ ಸಮಿತಿಯು ಪುತ್ತೂರಿನ ಭಕ್ತರನ್ನು ಸಂಪರ್ಕಿಸಿ, ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡುತ್ತಿದೆ. ದೀಪೋತ್ಸವದ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು.ಉದ್ಯಮಿಗಳಾದ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಪಿ.ಎಲ್., ವಿಜಯ ಬ್ಯಾಂಕ್‌ನ ನಿವೃತ್ತ ಎಜಿಎಂ ಜಗಜೀವನದಾಸ್ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ನೋಣಾಲು ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.ಸ್ವಾಗತ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ದೀಪೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ಸ್ವಯಂಸೇವಕರ ನಿಯೋಜನೆ ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಗಲಿರುವ ರಥದ ಕುರಿತು ಮಾಹಿತಿ ನೀಡಿದರು.ಕೋಶಾಧಿಕಾರಿ ಎಸ್. ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಶ್ ಬೆಜ್ಜಂಗಳ ಹಾಗೂ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಕರಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!