ಪುತ್ತೂರು: ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ‘ಮೆಡ್‌ಲ್ಯಾಂಡ್ ಕಪ್-2026’ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.ಪುತ್ತೂರಿನ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಎಂಟು ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳಲಿವೆ. ಪುತ್ತೂರು ಪೊಲೀಸ್ ಎಲೆವೆನ್, ಫಾರೆಸ್ಟ್ ಎಲೆವೆನ್, ಮೆಡ್‌ಲ್ಯಾಂಡ್ ಫಾಲ್ಕನ್ಸ್, ಪುತ್ತೂರು ಬಾರ್ ಅಸೋಸಿಯೇಷನ್, ಮೆಸ್ಕಾಂ ಪುತ್ತೂರು ಪರ್ಲ್ಸ್, ಕ್ಯಾಂಪ್ಕೋ ಪುತ್ತೂರು, ಕೆಎಸ್‌ಆರ್‌ಟಿಸಿ ಪುತ್ತೂರು ಮತ್ತು ಸಿಎಂಸಿ ಎಲೆವೆನ್ ಪುತ್ತೂರು ತಂಡಗಳು ಸೆಣಸಾಡಲಿವೆ.ಆಸ್ಪತ್ರೆಯ ಒಂದು ವರ್ಷದ ವೈದ್ಯಕೀಯ ಸೇವೆಯ ಸಂಭ್ರಮವನ್ನು ಕ್ರೀಡಾಕೂಟದ ಮೂಲಕ ಆಚರಿಸುವುದು ಪಂದ್ಯಾಟದ ಉದ್ದೇಶ. ವಿವಿಧ ಇಲಾಖೆಗಳ ನಡುವೆ ಬಾಂಧವ್ಯ ವೃದ್ಧಿ, ಕ್ರೀಡಾಸ್ಫೂರ್ತಿ ಹಾಗೂ ತಂಡದ ಒಗ್ಗಟ್ಟಿಗೆ ಆದ್ಯತೆ ನೀಡಲಾಗಿದೆ.ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಶಾಲ್ ಮಾತನಾಡಿ, ಪ್ರಥಮ ವರ್ಷದ ಸೇವಾ ಸಂಭ್ರಮವನ್ನು ಕ್ರೀಡಾಕೂಟದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಝಾಕ್ ಸಾಲ್ಮರ ಹಾಗೂ ಪೇಷಂಟ್ ಕೇರ್ ಕೋಆರ್ಡಿನೇಟರ್ ಅಖಿಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!