ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳನ್ನು ಅಳವಡಿಸಿಕೊಂಡು, ಕಳೆದ ಹಲವು ವರ್ಷಗಳಿಂದ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಸೇವೆ ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ ಪ್ರಕಾಶ್ ಕಜೆ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗಿದೆ.ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಗೋವಾದ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ನ.22ರಂದು ವಾಸ್ಕೋ ಬೈನಾದ ರವೀಂದ್ರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ವೈದ್ಯಕೀಯ ಕ್ಷೇತ್ರದ ಪ್ರಮುಖ ಅಂಗವಾಗಿರುವ ಲ್ಯಾಬೋರೇಟರಿ ಸೇವೆಯಲ್ಲಿ ಸಲ್ಲಿಸುತ್ತಿರುವ ಅಮೂಲ್ಯ ಕೊಡುಗೆ, ರೋಗಿಗಳ ಆರೈಕೆಯಲ್ಲಿ ತೋರುತ್ತಿರುವ ಕಾಳಜಿ ಹಾಗೂ ಸಮಾಜದ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಮಾಡುತ್ತಿರುವ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನ.25ರಂದು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಸಿಬ್ಬಂದಿ ವರ್ಗದವರು ಚೇತನ್ ಪ್ರಕಾಶ್ ಕಜೆ ಅವರನ್ನು ಅಭಿನಂದಿಸಿ ಗೌರವಿಸಿದರು.









