ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮಗಳು ನ.27 ಮತ್ತು 28ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿವೆ.ನ.27ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ವಂ. ಸುನಿಲ್ ಪಿಂಟೋ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ನ.28ರಂದು ಕಾಲೇಜಿನ ವಾರ್ಷಿಕೋತ್ಸವ ನಡೆಯಲಿದ್ದು, ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರೀತಮ್ ಫಿಲಿಪ್ ತಾವೋ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲ ವಂ. ಆ್ಯಂಟೋನಿ ಪ್ರಕಾಶ್ ಮೊಂತೇರೋ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಶನ್ ಲಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಆ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಶ್ರೀಪ್ರಕಾಶ್ ಬಿ. ಭಾಗವಹಿಸಲಿದ್ದಾರೆ.ಕಾಲೇಜಿನ ಪ್ರಾಂಶುಪಾಲ ವಂ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ.ಎಚ್., ಕವಿತಾ ಕೆ. ಹಾಗೂ ಫಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ. ಮತ್ತು ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!