ಬೆಂಗಳೂರು: ಇನ್ನೊಂದು ತಿಂಗಳಲ್ಲಿ ಮದುವೆಯ ಸಂಭ್ರಮ ಮನೆಮಾಡಬೇಕಿದ್ದ ಕುಟುಂಬದಲ್ಲಿ ಇದೀಗ ಶೋಕ ಆವರಿಸಿದೆ. ಬಾಲ್ಯದ ಗೆಳೆಯನೊಂದಿಗೆ ವಿವಾಹವಾಗಬೇಕಿದ್ದ 24 ವರ್ಷದ ಯುವತಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ.ಮೃತ ಯುವತಿಯನ್ನು ಕೆ.ಪಿ. ಅಗ್ರಹಾರದ ನಿವಾಸಿ ಭೂಮಿಕಾ ಎಂದು ಗುರುತಿಸಲಾಗಿದೆ. ಮುಂದಿನ ತಿಂಗಳು ಬಾಲ್ಯದ ಗೆಳೆಯ ಕಿರಣ್ ಎಂಬುವವರೊಂದಿಗೆ ಭೂಮಿಕಾಳ ವಿವಾಹ ನಿಶ್ಚಯವಾಗಿತ್ತು. ಎರಡೂ ಕುಟುಂಬಗಳಲ್ಲಿ ಮದುವೆಯ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ, ಮದುವೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಭೂಮಿಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮನೆಯ ಬಾಗಿಲು ಮುರಿದು ರಕ್ಷಿಸಲು ಯತ್ನಘಟನೆ ನಡೆದ ದಿನ ಗೌತಮ್ ಎಂಬ ಯುವಕ ಭೂಮಿಕಾಳ ಕುಟುಂಬಸ್ಥರಿಗೆ ಕರೆ ಮಾಡಿ, ಭೂಮಿಕಾ ಆತ್ಮಹತ್ಯೆಗೆ ಯತ್ನಿಸುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲ ಎಂದು ತಿಳಿಸಿದ್ದಾನೆ ಎನ್ನಲಾಗಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ತಕ್ಷಣ ಮನೆಗೆ ಧಾವಿಸಿದ್ದಾರೆ. ಮನೆಯ ಬಾಗಿಲು ಮುರಿದು ಒಳಗೆ ಪ್ರವೇಶಿಸಿ ಭೂಮಿಕಾಳನ್ನು ರಕ್ಷಿಸಲು ಮುಂದಾಗಿದ್ದಾರೆ.ಕೂಡಲೇ ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಭೂಮಿಕಾ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.ಮೃತದೇಹದ ಕೊರಳಲ್ಲಿ ತಾಳಿ ಪತ್ತೆಭೂಮಿಕಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ ವೇಳೆ ಕುಟುಂಬಸ್ಥರಿಗೆ ಮತ್ತೊಂದು ಆಘಾತ ಎದುರಾಗಿದೆ. ಮದುವೆ ಇನ್ನೂ ನಡೆಯದಿದ್ದರೂ ಭೂಮಿಕಾಳ ಕೊರಳಲ್ಲಿ ಅರಿಶಿನದ ಕೊಂಬಿನ ತಾಳಿ ಇರುವುದು ಕಂಡುಬಂದಿದೆ. ಆಕೆಯ ಕೊರಳಿಗೆ ತಾಳಿ ಕಟ್ಟಿದ್ದು ಯಾರು ಎಂಬ ಪ್ರಶ್ನೆ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.ಇತ್ತೀಚೆಗೆ ಕಾಲೇಜು ಪ್ರವಾಸದಿಂದ ಮರಳಿದ ಬಳಿಕ ಭೂಮಿಕಾಳ ವರ್ತನೆಯಲ್ಲಿ ಬದಲಾವಣೆಯಾಗಿತ್ತು ಎನ್ನಲಾಗಿದೆ. ಯಾರೊಂದಿಗೂ ಸರಿಯಾಗಿ ಮಾತನಾಡದೆ, ತನಗೆ ತುಂಬಾ ಹಿಂಸೆಯಾಗುತ್ತಿದೆ ಎಂದು ಅಜ್ಜಿಯ ಬಳಿ ಹೇಳಿಕೊಳ್ಳುತ್ತಿದ್ದಳು. ಅಲ್ಲದೆ, ರಾತ್ರಿಯಿಡೀ ಫೋನ್‌ನಲ್ಲಿ ಮಾತನಾಡುತ್ತಾ ಅಳುತ್ತಿದ್ದಳು ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.ಖಾಸಗಿ ಫೋಟೋಗಳ ಮೂಲಕ ಬ್ಲ್ಯಾಕ್‌ಮೇಲ್ ಆರೋಪಭೂಮಿಕಾಳ ಮೊಬೈಲ್ ಕರೆಗಳ ವಿವರಗಳನ್ನು ಪರಿಶೀಲಿಸಿದಾಗ ಗೌತಮ್ ಎಂಬಾತನೊಂದಿಗೆ ಹಲವು ಬಾರಿ ಮಾತನಾಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಗೌತಮ್ ತನ್ನ ಬಳಿ ಭೂಮಿಕಾಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.ಈ ಕಿರುಕುಳವೇ ಮಗಳ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಗೌತಮ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಭೂಮಿಕಾಳ ಸಾವಿಗೆ ಬ್ಲ್ಯಾಕ್‌ಮೇಲ್ ಕಾರಣವೇ, ಆಕೆಯ ಕೊರಳಲ್ಲಿ ತಾಳಿ ಪತ್ತೆಯಾಗಿದ್ದು ಹೇಗೆ ಹಾಗೂ ಘಟನೆಯ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!