ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಗರ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ಗಳಲ್ಲಿ ನ.28ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.ಈ ಫೀಡರ್‌ಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕಲ್ಲೇಗ, ಪುತ್ತೂರು ನಗರ, ಬನ್ನೂರು, ಕೊಡಿಪ್ಪಾಡಿ, ಮಂಜಲ್ಪಡು, ಬಜತ್ತೂರು ಮತ್ತು ನೆಕ್ಕಿಲಾಡಿ ಗ್ರಾಮಗಳ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.









