ಪುತ್ತೂರು :ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ವೈದ್ಯಕೀಯ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.ಪುತ್ತೂರಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಎಂಟು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿವೆ.

ಪುತ್ತೂರು ಪೊಲೀಸ್ ಎಲೆವೆನ್, ಫಾರೆಸ್ಟ್ ಎಲೆವೆನ್, ಮೆಡ್ಲ್ಯಾಂಡ್ ಫಾಲ್ಕನ್ಸ್, ಪುತ್ತೂರು ಬಾರ್ ಅಸೋಸಿಯೇಷನ್, ಮೆಸ್ಕಾಂ ಪುತ್ತೂರು ಪರ್ಲ್ಸ್, ಕ್ಯಾಂಪ್ಕೋ ಪುತ್ತೂರು, ಕೆಎಸ್‌ಆರ್‌ಟಿಸಿ ಪುತ್ತೂರು ಹಾಗೂ ಸಿಎಂಸಿ ಎಲೆವೆನ್ ಪುತ್ತೂರು ತಂಡಗಳು ಕ್ರೀಡಾಂಗಣದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲಿವೆ.ಆಸ್ಪತ್ರೆಯ ಒಂದು ವರ್ಷದ ವೈದ್ಯಕೀಯ ಸೇವೆಯ ಸಂಭ್ರಮವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ವಿವಿಧ ಇಲಾಖೆಗಳ ನಡುವೆ ಪರಸ್ಪರ ಬಾಂಧವ್ಯ ವೃದ್ಧಿಸುವುದು, ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು ಹಾಗೂ ಸ್ನೇಹಭಾವವನ್ನು ಉತ್ತೇಜಿಸುವುದು ಪಂದ್ಯಾಟದ ಪ್ರಮುಖ ಆಶಯವಾಗಿದೆ.

ಕಾರ್ಯಕ್ರಮದಲ್ಲಿ ಮೆಡ್ಲ್ಯಾಂಡ್ ಆಸ್ಪತ್ರೆಯ ಚೇರ್ಮನ್ ಡಾ. ಅಶ್ರಫ್ ಎಸ್. ಕಮ್ಮಾಡಿ, ಪುತ್ತೂರು ಉಪವಿಭಾಗದ ಡಿವೈಎಸ್ಪಿ ಪ್ರಮೋದ್ ಕುಮಾರ್, ಅರಣ್ಯ ಇಲಾಖೆಯ ಎಸಿಎಫ್ ರುದ್ರೇ ಗೌಡ, ಮೆಸ್ಕಾಂ ಎಇಇ ರಾಮಚಂದ್ರ, ಮೆಡ್ಲ್ಯಾಂಡ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ವಿಶಾಲ್, ಆಸ್ಪತ್ರೆಯ ಆಡಳಿತ ನಿರ್ದೇಶಕ ಸಂಶೀರ್ ಕಮ್ಮಾಡಿ, ವಿಜಯ ಸಾಮ್ರಾಟ್ ಸ್ಥಾಪಕ ಸಹಜ್ ರೈ ಬಳಜ್ಜ, ಅರುಣ್ ಕುಮಾರ್ ಪುತ್ತಿಲ, ಪದ್ಮಶ್ರೀ ಸೋಲಾರ್ ಮಾಲಕ ಸೀತಾರಾಮ್ ರೈ ಕೆದಂಬಾಡಿ ಗುತ್ತು, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಸಂಪ್ಯ ಎಂಡಿ ಜಯಂತ್ ನಡುಬೈಲ್ ಹಾಗೂ ತುಳು ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ವಿಶೇಷ ಆಕರ್ಷಣೆಯಾಗಿ ಭಾಗವಹಿಸಲಿದ್ದಾರೆ.ಈ ಕುರಿತು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಝಾಕ್ ಸಾಲ್ಮರ ಹಾಗೂ pcc ಅಖಿಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!