ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಸರ್ಕಾರ ಗೂಂಡಾ ಕಾಯ್ದೆಯನ್ನು ಹಿಂಪಡೆದಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.ಪ್ರಕರಣದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ (Goonda Act) ಅಳವಡಿಸಲು ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದು, ಈಗಾಗಲೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಆರೋಪಿಗಳು ಕಳೆದ ಒಂದೂವರೆ ವರ್ಷದಿಂದ ನ್ಯಾಯಾಂಗ ಬಂಧನದಲ್ಲಿರುವುದನ್ನು ಪರಿಗಣಿಸಿದ ಉಚ್ಚ ನ್ಯಾಯಾಲಯದ ಸಲಹಾ ಮಂಡಳಿ ಅರ್ಜಿಯನ್ನು ಮಾನ್ಯ ಮಾಡಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.









