ಉಪ್ಪಿನಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ.

ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಮೃತರು.

ಲೋಹಿತ್ ಕುಮಾರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಮದ್ಯಪಾನದ ಚಟ ಹೊಂದಿದ್ದರು ಎನ್ನಲಾಗಿದೆ. ದಂಪತಿ ನಡುವೆ ಮನಸ್ತಾಪಗೊಂಡು ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತಾಯಿ ಮನೆಗೆ ಹೋಗಿದ್ದರು ಎನ್ನಲಾಗಿದೆ.

ಲೋಹಿತ್ ಕುಮಾರ್ ಸೆ.18ರಂದು ಸಂಜೆ ಗುಂಡ್ಯಕ್ಕೆ ಹೋಗಿ ಮನೆಗೆ ಬಂದಿದ್ದರು. ಬಳಿಕ ಮೊಬೈಲ್ ವಾಟ್ಸಾಪ್ ಸ್ಟೇಟಸ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಂದೇಶ ಹಾಕಿದ್ದು ಮಂಗಳೂರಿನಲ್ಲಿರುವ ಅವರ ಅಣ್ಣನ ಮಗಳು ಬೆಳಿಗ್ಗೆ ನೋಡಿ ಮಾಹಿತಿ ನೀಡಿದ್ದರು. ಬೆಳಿಗ್ಗೆ ಲೋಹಿತ್ ವಾಸವಾಗಿದ್ದ ಮನೆಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!