ಗಂಗೊಳ್ಳಿ, ಸೆ.25: ಗಂಗೊಳ್ಳಿ ಜಾಮಿಯಾ ಮೊಹಲ್ಲಾ ನಿವಾಸಿ ಬಶೀರ್ ಅಹ್ಮದ್ ಎಂಬವರ ಪುತ್ರ ಮುಬಾಶೀರ್ ಬಷೀರ್ (30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾದರು.

ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಇವರು, ಪತ್ನಿಯ ಜೊತೆಯಲ್ಲಿಯೇ ಸೌದಿಯಲ್ಲಿ ವಾಸವಾಗಿದ್ದರು

ಸಮಾಜದ ತುರ್ತು ಅಗತ್ಯಗಳಿಗೆ ಸ್ಪಂದಿಸುತ್ತಿದ್ದ ಇವರು, ಬಡವರಿಗೆ ಆರ್ಥಿಕ ನೆರವು ಕೂಡ ನೀಡುತ್ತಿದ್ದರು. ಕೆಲ ಸಮಯದ ಹಿಂದೆ ಉದ್ಯೋಗಕ್ಕಾಗಿ ಇವರು ಸೌದಿಗೆ ತೆರಳಿದ್ದರು. ಇವರು ಪತ್ನಿ, ತಾಯಿ, ತಂದೆ, ಹಾಗೂ ಓರ್ವ ಸಹೋದರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನೂ ಕ್ರಮಗಳ ನಂತರವೇ ತಿಳಿದು ಬರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!