ಪುತ್ತೂರು; ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.
ರಾತ್ರಿ 11 ಗಂಟೆ ವೇಳೆಗೆ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರಿನ ಕೊಲ್ಲೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.‌ ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!