ಮಡಿಕೇರಿ: ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನ ಮೃತಪಟ್ಟಿದ್ದಾರೆ.
ಸೆ. 25ರ ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ಡಿಕ್ಕಿಯಾಗಿ ಕ್ರಿಸ್ಟಲಿನ ಗಾಯಗೊಂಡಿದ್ದರು.
ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಸೆ.26ರ ಗುರುವಾರ ಬೆಳಿಗ್ಗೆ ನಿಧನ ಹೊಂದಿದರು.
ಕ್ರಿಸ್ಟಲಿನ ವಿರಾಜಪೇಟೆ ಬೇಟೋಳಿ ನಿವಾಸಿ ಸಬಾಸ್ಟಿನ್ ಅವರ ಪತ್ನಿ. ಮೃತರ ಅಂತ್ಯಕ್ರಿಯೆ ಸೆ.27ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.
ಮೃತ ಕ್ರಿಸ್ಟಲಿನ ಅವರು ಪತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.















