ಪುತ್ತೂರು: ಮಾಡಿದ ಸಾಲವನ್ನು ಮರುಪಾವತಿ ಮಾಡುವಂತೆ ಸೂಚನೆ ನೀಡಲು ಮನೆಯೊಂದಕ್ಕೆ ಹೋದ ಬ್ಯಾಂಕ್ ಸಿಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿದ ಆರೋಪಕ್ಕೆ ಸಂಬಂಧಿಸಿ ಇಬ್ಬರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ, ‘ಕಾರಿನಲ್ಲಿ ಬಂದ ಅಪರಿಚಿತರು ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಸಾಲ ತೀರಿಸುವ ಬದಲು ನಮ್ಮೊಂದಿಗೆ ಬರಬೇಕೆಂದು ಮಾನಭಂಗಕ್ಕೆ ಯತ್ನಿಸಿದ ಹಾಗೂ ದೂರು ನೀಡಿದರೆ ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆಂದು ದೂರು ನೀಡಿ ನಿಮ್ಮನ್ನು ಒಳಗೆ ಹಾಕುತ್ತೇವೆ ಎಂದು ಬೆದರಿಸಿದ್ದಾರೆಂದು’ ಮನೆಯಲ್ಲಿದ್ದ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ.

ಮನೆಯಲ್ಲಿದ್ದ ಮಹಿಳೆಯ ದೂರು:

ಘಟನೆಗೆ ಸಂಬಂಧಿಸಿ ಬಲ್ನಾಡು ಉಜುರಪಾದೆ ನಿವಾಸಿ ಕೀರ್ತಿ ಅವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬ್ಯಾಂಕ್‌ನ ಮೂವರು ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

ಸೆ.25ರ ಮಧ್ಯಾಹ್ನ 3 ಗಂಟೆಗೆ ಗಂಡಸರು ಇಲ್ಲದ ಸಮಯದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿದಲ್ಲದೆ ವಿಚಾರಿಸಿದಾಗ ತಮ್ಮ ಗುರುತು ಪರಿಚಯ ನೀಡದೆ ನಮಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ನಿಮ್ಮ ಮನೆಯನ್ನು ಜಪ್ತಿ ಮಾಡಿ ನಿಮ್ಮನ್ನು ಬೀದಿಗೆ ಎಳೆಯುತ್ತೇವೆ ಎಂದು ಹೆದರಿಸಿದ್ದಾರೆ. ಆರೋಪಿಗಳ ಪೈಕಿ ಚೈತನ್ಯ ಮತ್ತು ಆಕಾಶ್ ಎಂಬವರು ನಿಮ್ಮ ಲೋನ್ ತೀರಿಸುವ ಬದಲು ನಮ್ಮೊಂದಿಗೆ ಬಂದರೆ ಸಾಕು ಎಂದು ಹೇಳಿ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆ. ಈ ವೇಳೆ ಇನ್ನೋರ್ವ ಆರೋಪಿ ದಿವ್ಯಾಶ್ರೀ ಎಂಬವರು ಇಬ್ಬರು ಆರೋಪಿಗಳಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!